ವಿರಾಜಪೇಟೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)' ಅಭಿಯಾನ
admincoorgdaily

ವಿರಾಜಪೇಟೆ: ವಿರಾಜಪೇಟೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ಇವರ ವತಿಯಿಂದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)' ಅಭಿಯಾನದ ಕುರಿತು ವಿವರಣೆ ನೀಡುವ ಕಾರ್ಯಕ್ರಮ ವಿರಾಜಪೇಟೆಯಲ್ಲಿ ಇತ್ತಿಚೆಗೆ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್‌ನ ಜಿಲ್ಲಾ ಕಾರ್ಯದರ್ಶಿ ಪಿ.ಕೆ. ಅಬ್ದುಲ್ ರೆಹಮಾನ್ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ರಾಜ್ಯಾದ್ಯಂತ 'ಸೀರತ್ ಅಭಿಯಾನ'ವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಅಭಿಯಾನದ ಶೀರ್ಷಿಕೆ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ (ಸ)' ಎಂದಾಗಿದೆ ಎಂದು ತಿಳಿಸಿದರು.
ಸಮಗ್ರ ಕ್ರಾಂತಿಯ ಪ್ರವಾದಿ ಮುಹಮ್ಮದ್ (ಸ) ಅವರು ಜಗತ್ತಿಗೆ ತಂದ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ ಮತ್ತು ಮಾನವ ಘನತೆಯ ಮೇಲೆ ಆಧಾರಿತವಾದ ಅಪ್ಪಟ ಮಾನವೀಯ ಕ್ರಾಂತಿಯಾಗಿದೆ. ಈ ಕ್ರಾಂತಿಯು ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಬೆಳಗಿಸಿದೆ. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಮಾಡುವುದು ಅವರ ಮುಖ್ಯ ಗುರಿಯಾಗಿತ್ತು ಎಂದರು.
ಅಭಿಯಾನದ ಉದ್ದೇಶವನ್ನು ವಿವರಿಸಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ಸಮಾಜದಲ್ಲಲಿರುವ ತಪುö್ಪ ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವೈಯುಕ್ತಿಕ ಭೇಟಿ, ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮಗಳು, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಷನ್ (ವಸ್ತು ಪ್ರದರ್ಶನ), ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ರ‍್ರ್ಯಾಲಿಗಳಂತಹ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನ ಜಿಲ್ಲಾ ಸಮಿತಿ ಸದಸ್ಯರಾದ ಕೆ.ಟಿ. ಬಶೀರ್, ಗೋಣಿಕೊಪ್ಪ ಜಮಾಅತೆ ಇಸ್ಲಾಮಿ ಹಿಂದ್‌ನ ಸ್ಥಾನೀಯ ಅಧ್ಯಕ್ಷರಾದ ತನ್ವೀರ್ ಅಹಮದ್, ಸದಸ್ಯರಾದ ಮೌಲಾನ ಸಗೀರ್ ಅಝಾರಿ ಹಾಗೂ ಎ.ಎ. ಉಮ್ಮರ್ ಉಪಸ್ಥಿತರಿದ್ದರು.