Kodagu

ಧ್ವಜಾರೋಹಣ ಮಾಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

admincoorgdaily

ಧ್ವಜಾರೋಹಣ ಮಾಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಮಡಿಕೇರಿ:ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡದ ಅಧಿಕಾರಿಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿಯ ಸದಸ್ಯರು ಇಂದು ಮಡಿಕೇರಿ ನಗರದ ಹಿಂದುಳಿದ ವರ್ಗಗಳ ಇಲಾಖೆಯ ಮುಂಭಾಗ ಪ್ರತಿಭಟನೆ ನಡೆಸಿದರು. ಧ್ವಜಾರೋಹಣ ಮಾಡದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರಾಷ್ಟ್ರೀಯ ಹಬ್ಬಕ್ಕೆ ಗೌರವ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಘೋಷಣೆಗಳನ್ನು ಕೂಗಿದರು. "ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ" ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.