ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಪ್ರತಿಭಟನೆ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಪ್ರತಿಭಟನೆ

ಮಡಿಕೇರಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡುವಂತೆ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಶಿಕ್ಷಕರು ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ೨೦೧೭ರಲ್ಲಿ ವೃಂದ ಮತ್ತು ನೇಮಕಾತಿ ನಿಯಮ ಜಾರಿಗೆ ತರಲಾಗುತ್ತದೆ. ಪಿಎಸ್‌ಡಿ ಮತ್ತು ಜಿಪಿಟಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಒಡೆದು ಹಾಕುತ್ತಾರೆ. ೧ನೇ ತರಗತಿಯಿಂದ ೮ನೇ ತರಗತಿವರೆಗೆ ನೇಮಕಾತಿ ಮಾಡಿ ನಂತರ ಪಿಎಸ್‌ಡಿ ನಿಯಮದಡಿ ೧ ರಿಂದ ೫ ತರಗತಿಗೆ ಪಾಠ ಮಾಡಿ ಎಂದು ಹಿಂಬಡ್ತಿ ನೀಡುತ್ತಾರೆ. ಇದರಿಂದ ಶಿಕ್ಷಕರು ತೊಂದರೆಗೆ ಸಿಲುಕಲಿದ್ದಾರೆ. ಶೀಘ್ರವಾಗಿ ಸರ್ಕಾರ ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ೮೦ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಸರ್ಕಾರಕ್ಕೆ ಜಿಲ್ಲಾಡಳಿತ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.