ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಿ DYFI ಪ್ರತಿಭಟನೆ

ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯಿಸಿ DYFI ಪ್ರತಿಭಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ಭರ್ತಿ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾ ನಿರತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತ ಪ್ರಜಾಸತಾತ್ಮಕ ಯುವ ಫೆಡರೇಷನ್‌ನ ಅಧ್ಯಕ್ಷ ಎಚ್.ಆರ್.ರಾಚ್ಚಪಾಜಿ, ಜಿಲ್ಲೆಯಲ್ಲಿ ಕಾರ್ಮಿಕ ವರ್ಗದವರು, ಸಣ್ಣ ರೈತರು, ಮಧ್ಯಮ ವರ್ಗದ ಜನತೆ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳನ್ನು ಅವಲಂಬಿಸಿದೆ. ಎಲ್ಲಾ ಇಲಾಖೆಗಳಲ್ಲಿಯೂ ಹುದ್ದೆಗಳು ಖಾಲಿಯಿದೆ. ಆದರೂ ನೇಮಕ ಮಾಡಲಾಗುತ್ತಿಲ್ಲ. ಜಿಲ್ಲೆಯಲ್ಲಿ ಉದ್ಯಾವಂತ ಯುವಜನರು ಇದ್ದು, ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ಭರ್ತಿ ಮಾಡಿ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರಗಳು ಯುವಜನರ ವಿರುದ್ಯೋಗದ ಬೇಡಿಕೆಗಳನ್ನು ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಡಿವೈಎಫಐ ಸಂಘಟನೆಯು ತೀವ್ರ ರೀತಿಯ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು ಪ್ರತಿಭಟನೆಯಲ್ಲಿ ಫೆಡರೇಷನ್‌ನ ಕಾರ್ಯದರ್ಶಿ ಜ್ಯೋತಿ ಕೃಷ್ಣ, ಖಜಾಂಚಿ ಎ.ಎಚ್.ಸಾಧಿಕ್ ಸೇರಿದಂತೆ ಫೆಡರೇಷನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.