ಗುತ್ತಿಗೆದಾರರಿಗೆ ನೀಡಲು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ 37,೦೦೦ ಕೋಟಿ ಬಿಲ್ ಪಾವತಿ ಮಾಡಲು ಆಗ್ರಹಿಸಿ ಮಾ. 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

Feb 25, 2026 - 00:39
 0  287
ಗುತ್ತಿಗೆದಾರರಿಗೆ ನೀಡಲು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ 37,೦೦೦ ಕೋಟಿ  ಬಿಲ್ ಪಾವತಿ ಮಾಡಲು ಆಗ್ರಹಿಸಿ ಮಾ. 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಮಡಿಕೇರಿ: ಗುತ್ತಿಗೆದಾರರಿಗೆ ನೀಡಲು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ೩೭,೦೦೦ ಕೋಟಿ ಬಿಲ್ ಪಾವತಿ ಮಾಡಲು ಆಗ್ರಹಿಸಿ ಮಾ. 6ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎಂದು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಕಾರ್ಯಧ್ಯಕ್ಷ ವಿ.ಎ.ಲಾರೆನ್ಸ್ ಆಗ್ರಹಿಸಿದರು.

ಹಾಲಿ ಸರ್ಕಾರ ಈ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿರುವುದರಲ್ಲಿ ಅರ್ಥವಿಲ್ಲ. ಈ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಂದ ಸುಮಾರು ₹20 ಸಾವಿರ ಕೋಟಿ ಸಹಿತ ಈಗಿನ ಸರ್ಕಾರದ ಅವಧಿಯಲ್ಲಿ ಮತ್ತೆ 17,000 ಕೋಟಿ ಬರಬೇಕಿದೆ. ಕಳೆದ ಮೂರು ವರ್ಷಗಳಿಂದಲೂ ಬಿಲ್ ಪಾವತಿ ಬಾಕಿ ಇದೆ. ಈಗ ಹಿಂದಿನ ಸರ್ಕಾರವನ್ನು ದೂಷಿಸಿ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದರು.

 ಜಿಲ್ಲೆಯ ಗುತ್ತಿಗೆದಾರರಿಗೆ ೧೯೫.೨೬ ಕೋಟಿ ಹಣ ಸರ್ಕಾರದಿಂದ ಬರಲು ಬಾಕಿಯಿದೆ. ಈ ಹಿನ್ನೆಲೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ‌ನಡೆಯಲಿರುವ ಪ್ರತಿಭಟನೆಗೆ ಜಿಲ್ಲೆಯಿಂದ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರವಿ ಚಂಗಪ್ಪ, ಉಪಾಧ್ಯಕ್ಷ ರಾಜೀವ್ ಲೋಚನ, ಅರುಣ್ ಕುಮಾರ್, ಬಾಬು, ರವೀಂದ್ರ ರೈ, ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0