ಬೆಟ್ಟತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ
admincoorgdaily

ಮಡಿಕೇರಿ;ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ಬೆಟ್ಟತ್ತುರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಬೆಟ್ಟತೂರು ಗ್ರಾಮಸ್ಥರು ಮಡಿಕೇರಿ ಮಂಗಳೂರು ಹೆದ್ದಾರಿ ಮದೆ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ರಸ್ತೆ ತಡೆ ನಡೆಸಿದರು.
ಈ ಸಂದರ್ಭ ಅರಣ್ಯ ಅಧಿಕಾರಿಗಳು ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು. ಆದರೆ ಚೆಕ್‌ನಲ್ಲಿ ಅರಣ್ಯ ಅಧಿಕಾರಿಗಳ ಸಹಿ ಇಲ್ಲದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಅರಣ್ಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯನ್ನು ನಡೆಸಿದ್ದಾರೆ.
ಕಾಡಾನೆ ಸೆರೆಗೆ ಇಂದಿನಿಂದಲೇ ಕೂಂಬಿಂಗ್ ಕಾರ್ಯಾಚರಣೆ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಮೃತ ವಿದ್ಯಾರ್ಥಿನಿ ಸಹೋದರನಿಗೆ ಸರಕಾರಿ ಉದ್ಯೋಗ ನೀಡುವಂತೆ ಗ್ರಾಮಸ್ಥರ ಆಗ್ರಹಿಸಿದರು. ಪರಿಹಾರ ಚೆಕ್ ಸಹಿ ಹಾಕದ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.