ಪ್ರಧಾನಮಂತ್ರಿ ‘ವಿಶ್ವಕರ್ಮ’ ಯೋಜನೆಯಡಿ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಪ್ರಧಾನಮಂತ್ರಿ ‘ವಿಶ್ವಕರ್ಮ’ ಯೋಜನೆಯಡಿ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಮಡಿಕೇರಿ ಮಾ.12 :-ಪ್ರಧಾನಮಂತ್ರಿ ಅವರ ‘ವಿಶ್ವಕರ್ಮ’ ಯೋಜನೆ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. 

       ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಕೈಗಾರಿಕ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ, ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮದಡಿ ಇದುವರೆಗೆ ಜಿಲ್ಲೆಯ 103 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಮಂದಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗಿದೆ, ಜೊತೆಗೆ ಪ್ರಮಾಣ ಪತ್ರ ವಿತರಿಸಲಾಗಿದೆ ಎಂಬ ಮಾಹಿತಿಯ ಪಟ್ಟಿ ಒದಗಿಸುವಂತೆ ಸಲಹೆ ನೀಡಿದರು. 

      ಈ ಕುರಿತು ಮಾಹಿತಿ ನೀಡಿದ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಹನುಮಂತರಾಯ ಅವರು, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಟೈಲರ್, ಕಾರ್‍ಪೆಂಟರ್, ಲಾಂಡ್ರಿ ವರ್ಕರ್ಸ್, ಗಾರ್ಮೆಂಟ್ಸ್ ಮೇಕರ್, ಡಾಲ್ ಅಂಡ್ ಟಾಯ್ ಮೇಕರ್, ಪೆÇೀರ್ಟಲ್, ಮೆಟಲ್ ಸ್ಮಿತ್, ಬೋಟ್ ಮೇಕರ್, ಕೊಬ್ಲರ್ ಮತ್ತಿತರ ಕಾರ್ಯಕ್ರಮದಡಿ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು. 

      ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 111 ಅರ್ಜಿ ಸ್ವೀಕರಿಸಲಾಗಿದ್ದು, ಇದರಲ್ಲಿ 111 ಅರ್ಜಿ ಅಂಗೀಕರಿಸಲಾಗಿದೆ ಎಂದು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದರು. 

     ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 419 ಅರ್ಜಿ ಸ್ವೀಕರಿಸಲಾಗಿದ್ದು, 111 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 307 ಅರ್ಜಿಗಳು ವಿವಿಧ ಹಂತದಲ್ಲಿ ಬಾಕಿ ಇದ್ದು, 1 ಅರ್ಜಿ ತಿರಸ್ಕøತಗೊಂಡಿದೆ ಎಂದು ಕೆ.ಹನುಮಂತರಾಯ ಹೇಳಿದರು. 

     ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ತರಬೇತಿ ಪಡೆದವರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆಯೇ, ಸರ್ಕಾರದ ಕಾರ್ಯಕ್ರಮ ಉಪಯೋಗ ಆಗುತ್ತಿದೆಯೇ ಎಂಬ ಬಗ್ಗೆ ಮಾಹಿತಿ ಒದಗಿಸುವಂತಾಗಬೇಕು ಎಂದರು. 

      ‘ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಸಮಿತಿ ಸದಸ್ಯರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು. ಸರ್ಕಾರದ ಕಾರ್ಯಕ್ರಮಗಳು ಅರ್ಹರಿಗೆ ತಲುಪುತ್ತಿವೆಯೇ ಎಂಬ ಬಗ್ಗೆ ತಿಳಿಸಬೇಕು ಎಂದು ನಿರ್ದೇಶನ ನೀಡಿದರು.’ 

      ಕೌಶಲ್ಯ ಅಭಿವೃದ್ಧಿ ಯೋಜನೆಯಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವ ಬಗ್ಗೆ ಮಾಹಿತಿ ನೀಡುವಂತೆ ಹೇಳಿದರು.

       ಸಭೆಯಲ್ಲಿ ಕೆಎಸ್‍ಎಸ್‍ಐಡಿಸಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ವೇದಾವತಿ, ಕೆಐಎಡಿಬಿ ಮಾಧುಸ್ವಾಮಿ, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಸಣ್ಣ ಕೈಗಾರಿಕಾ ಘಟಕಗಳ ಅಧ್ಯಕ್ಷ ಕೆ.ಎ.ಸಂದೀಪ್ ಕುಮಾರ್, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಹಾಗೂ ಮೈಸೂರು ಕೆಐಎಡಿಬಿ ಕೈಗಾರಿಕಾ ಕಾರ್ಯಪಾಲಕ ಅಭಿಯಂತರರು, ಕೆ.ಎಸ್.ಎಸ್.ಐ.ಡಿ.ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಇತರರು ಇದ್ದರು.

       ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ:-ಕೈಗಾರಿಕಾ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದು ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದರ ಜತೆಗೆ ಉದ್ದಿಮೆ ಪ್ರಾರಂಭಿಸಲು ಹೆಚ್ಚಿನ ಅನುಕೂಲ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

     ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದವರು ಮಾತನಾಡಿ, ನಿಗಮದ ಮಂಡಳಿ ಸಭೆ ಕರೆದು ಈ ವಿಷಯವಾಗಿ ಕೂಲಂಕಷವಾಗಿ ಚರ್ಚಿಸಿ, ಕಾಂಪ್ಲೆಕ್ಸ್ ಮೌಲ್ಯಕ್ಕೆ ವಿಲೇವಾರಿಯಾಗದ ಕಾರಣ ನವೀಕರಣಗೊಳಿಸಲು ರೇಖಾ ಅಂದಾಜು ಪಟ್ಟಿಯನ್ನು ಸಲ್ಲಿಸಲು ಹಾಗೂ ಪ್ರಸ್ತುತ ಕಟ್ಟಡದ ಭೌತಿಕ ಸ್ಥಿತಿ-ಗತಿಗಳ ವಿಷಯದ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಕಟ್ಟಡ ಕಾಮಗಾರಿಯನ್ನು ನಿಗಮದ ವತಿಯಿಂದ ನವೀಕರಣಗೊಳಿಸಿ, ಬಾಡಿಗೆ ಆಧಾರದ ಮೇಲೆ ನೀಡುವಲ್ಲಿ ಸಭೆಯಲ್ಲಿ ನಿರ್ಣಯಿಸಿರುವ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಯಿತು.

        ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಆದಷ್ಟು ಶೀಘ್ರವಾಗಿ ಟೆಂಡರ್ ಕರೆದು, ನವೀಕರಣ ಪೂರ್ಣಗೊಳಿಸಿ ಕಟ್ಟವನ್ನು ಬಾಡಿಗೆ ಆಧಾರದ ಮೇಲೆ ಮಂಡಳಿಯ ನಿಯಮಾನುಸಾರ ಹಂಚಿಕೆ ಮಾಡಲು ಸೂಚಿಸಿದರು. 

         ಕಾರ್ಯಪಾಲಕ ಅಭಿಯಂತರ ಮಾತನಾಡಿ, ಕೈಗಾರಿಕಾ ಪ್ರದೇಶ ಜಮೀನನ್ನು ಕೆ.ಐ.ಎ.ಡಿ.ಬಿ ಹೆಸರಿಗೆ ದಾಖಲಿಸಲು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಅವರು ಸೋಮವಾರಪೇಟೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಪತ್ರ ಬರೆಯಲಾಗಿದೆ ಎಂದರು. 

      ಭೂಮಾಪಕರು ಮತ್ತು ವಿಶೇಷ ಭೂಸ್ವಾಧೀನಾಧಿಕಾರಿ ತೋರಿಸಿದ ಜಾಗವನ್ನು ಅಳತೆಮಾಡಿ ನಕಾಶೆಯನ್ನು ತಯಾರಿಸಿ, ವರದಿಯನ್ನು ನೀಡಿರುವುದಾಗಿ ಕೆಐಎಡಿಬಿ ಅಧಿಕಾರಿಗಳು ಸಭೆಗೆ ವಿವರಿಸಿದರು. 

     ಜಮೀನಿನ ಗಡಿ ನಕಾಶೆ ಬಗ್ಗೆ ಕೆಐಎಡಿಬಿ ಅಧಿಕಾರಿಗಳು ಭೂದಾಖಲೆಗಳ ಸಹಾಯಕ ನಿರ್ದೇಶಕರು ಮತ್ತು ಕಂದಾಯ ಅಧಿಕಾರಿಗಳು ತಕರಾರು ಸಲ್ಲಿಸಿರುವ ಅರ್ಜಿದಾರರ ಸಮ್ಮುಖದಲ್ಲಿ ಜಂಟಿಯಾಗಿ ಸರ್ವೆಕಾರ್ಯ ನಡೆಸಿ ಸರಿಯಾದ ಗಡಿರೇಖೆ ಗುರುತಿಸಿ, ವಿವರವಾದ ವರದಿಯೊಂದಿಗೆ ಮುಂದಿನ ಸಭೆಗೆ ಮಂಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

       ಸೋಮವಾರಪೇಟೆ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿರುವ ತರಬೇತಿ ಶೆಡ್ ಹಾಗೂ ಜಾಗವನ್ನು ಕಾವೇರಿ ಹ್ಯಾಂಡ್‍ಲೂಮ್ಸ್ ಮಹಾ ಮಂಡಲಕ್ಕೆ ವರ್ಗಾಯಿಸುವ ಕುರಿತು ಚರ್ಚೆ ನಡೆಯಿತು. 

      ಸಭೆಯಲ್ಲಿ ಕೆಎಸ್‍ಎಸ್‍ಐಡಿಸಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ವೇದಾವತಿ, ಕೆಐಎಡಿಬಿ ಮಾಧುಸ್ವಾಮಿ, ಸಣ್ಣ ಕೈಗಾರಿಕಾ ಘಟಕಗಳ ಅಧ್ಯಕ್ಷ ಕೆ.ಎ.ಸಂದೀಪ್ ಕುಮಾರ್, ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಹಾಗೂ ಮೈಸೂರು ಕೆಐಎಡಿಬಿ ಕೈಗಾರಿಕಾ ಕಾರ್ಯಪಾಲಕ ಅಭಿಯಂತರರು, ಕೆ.ಎಸ್.ಎಸ್.ಐ.ಡಿ.ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಮಡಿಕೇರಿ ಸೆಸ್ಕ್ ಕಾರ್ಯಪಾಲಕ ಅಭಿಯಂತರರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಇತರರು ಇದ್ದರು.