ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ಅಟೆಂಡರ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಮಡಿಕೇರಿ:-ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ಅಟೆಂಡರ್ ಹುದ್ದೆಯ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಗಳಿದ್ದಲ್ಲಿ ಸೆಪ್ಟೆಂಬರ್, 22 ರ ಸಂಜೆ 4 ಗಂಟೆಯೊಳಗೆ ಲಿಖಿತದಲ್ಲಿ ಪೂರಕ ದಾಖಲಾತಿಗಳೊಂದಿಗೆ ಜಿಲ್ಲಾ ಆಯುಷ್ ಅಧಿಕಾರಿ, ಜಿಲ್ಲಾ ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಮನವಿಯ ಮೂಲಕ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.