Kodagu

ಪುಸ್ತಕ ಪ್ರದರ್ಶನಕ್ಕೆ ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

admincoorgdaily

ಮಡಿಕೇರಿ :-ಸಾರ್ವಜನಿಕ ಗ್ರಂಥಾಲಯ ಇಲಾಖೆಯು, 2022 ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಡಾ.ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ.ಬಡಾವಣೆ, (ಡಾ.ಬಾಲ ಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ) ವಿಜಯನಗರ, ಬೆಂಗಳೂರು ಇಲ್ಲಿ ಆಗಸ್ಟ್, 20 ರಿಂದ 22 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಏರ್ಪಡಿಸಲಾಗಿದೆ.

ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿಯಲ್ಲಿ ಪ್ರದರ್ಶಿಸಲಾಗುವುದು ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾಗಿ ಸಲ್ಲಿಸಿದ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್, 30 ರ ಸಂಜೆ 5.30 ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ತಿಳಿಸಿದೆ. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ ಅವರು ತಿಳಿಸಿದ್ದಾರೆ.