ಪೊನ್ನಪ್ಪಸಂತೆಯಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ
ಸಿದ್ದಾಪುರ:ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡಾ ಬಾಳೆಲೆ ಮತ್ತು ಬ್ಯಾಂಕ್ ಆಫ್ ಬರೋಡಾ ಕೋಣನಕಟ್ಟೆ, ಇವರ ಸಹಯೋಗದೊಂದಿಗೆ ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ, ಪೊನ್ನಪ್ಪಸಂತೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ,ಕೇಂದ್ರ ಸರಕಾರದ ಆದೇಶದಂತೆ ಆಯಾಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಮಂಗಳವಾರ ಪೊನ್ನಪ್ಪಸಂತೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು .
ಕಾರ್ಯಕ್ರಮವನ್ನು ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ವ್ಯವಸ್ಥಾಪಕರಾದ ಶ್ರೀಮತಿ ಗೀತ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಅವಾರ್ಡ್ ಸಂಸ್ಥೆಯ ತಾಲ್ಲೂಕು ಆರ್ಥಿಕ ಸಮಾಲೋಚಕ ಅನಿಲ್ ಕುಮಾರ್ ಮಾತನಾಡಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದರು.
ಬಾಳಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕುಶಾಲಪ್ಪ ನವರು ಮಾತನಾಡಿ ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತ ವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮ ದಲ್ಲಿ ಪೊನ್ನಪ್ಪಸಂತೆ ಗ್ರಾಮ ಪಂಚಾಯತಿ ಸದ್ಯರಾದ ವಿನು ಚಂಗಪ್ಪ, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.