ಪಲ್ಸ್ ಪೊಲಿಯೋ:ಡಿ.22ರವರೆಗೆ(ಸೋಮವಾರ) ಕೊಡಗು ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಲಸಿಕೆ ಹಾಕಿದ್ದಾರೆ ಗೊತ್ತೇ!

ಪಲ್ಸ್ ಪೊಲಿಯೋ:ಡಿ.22ರವರೆಗೆ(ಸೋಮವಾರ) ಕೊಡಗು ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಲಸಿಕೆ ಹಾಕಿದ್ದಾರೆ ಗೊತ್ತೇ!

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ 22.12.2025 ರಂದು ನಡೆದ ರಾಷ್ಟೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಇದುವರೆಗೆ ಒಟ್ಟು 37,843 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.115.7% ಪ್ರಗತಿ ಸಾಧಿಸಲಾಗಿದೆ. 

ಗ್ರಾಮೀಣ ಪ್ರದೇಶದಲ್ಲಿ ಒಟ್ಟು 33,923 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 115.3 %ರಷ್ಟು ನಗರ ಪ್ರದೇಶದಲ್ಲಿ ಒಟ್ಟು 3920 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.119.7 %ರಷ್ಟು ಪ್ರಗತಿ ಸಾಧಿಸಲಾಗಿದೆ.

ಮಡಿಕೇರಿ ತಾಲ್ಲೂಕು:- ಒಟ್ಟು 10,593 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.116.1 %ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 8,271 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 112.3%ರಷ್ಟು ಹಾಗೂ ನಗರ ಪ್ರದೇಶದಲ್ಲಿ 2,322 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.132.0 %ರಷ್ಟು ಪ್ರಗತಿ ಸಾಧಿಸಲಾಗಿದೆ.

ಸೋಮವಾರಪೇಟೆ ತಾಲ್ಲೂಕು:- ಒಟ್ಟು 12,578 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.116.9% ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 12,218 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 116.2%ರಷ್ಟು ನಗರ ಪ್ರದೇಶದಲ್ಲಿ 360 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.150.0% ರಷ್ಟು ಪ್ರಗತಿ ಸಾಧಿಸಲಾಗಿದೆ.

ವಿರಾಜಪೇಟೆ ತಾಲ್ಲೂಕು:- ಒಟ್ಟು 14,672 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.114.4% ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 13,434 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 116.3%ರಷ್ಟು ನಗರ ಪ್ರದೇಶದಲ್ಲಿ 1,238 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.97.0% ರಷ್ಟು ಪ್ರಗತಿ ಸಾಧಿಸಲಾಗಿದೆ.