ಪಲ್ಸ್ ಪೋಲಿಯೋ: ಕೊಡಗು ಜಿಲ್ಲೆಯಲ್ಲಿ ಭಾನುವಾರ ಎಷ್ಟು ಮಕ್ಕಳು ಪೊಲಿಯೋ ಲಸಿಕೆ ಹಾಕಿದ್ದಾರೆ ಗೊತ್ತೇ!
ಮಡಿಕೇರಿ:,ಕೊಡಗು ಜಿಲ್ಲೆ ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಇದುವರೆಗೆ(ಭಾನುವಾರ) ಒಟ್ಟು 34,736 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.106.2 ಪ್ರಗತಿ ಸಾಧಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಒಟ್ಟು 31,100 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 105.7%ರಷ್ಟು ನಗರ ಪ್ರದೇಶದಲ್ಲಿ ಒಟ್ಟು 3,636 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.111.0%ರಷ್ಟು ಪ್ರಗತಿ ಸಾಧಿಸಲಾಗಿದೆ.
ಮಡಿಕೇರಿ ತಾಲ್ಲೂಕು:- ಒಟ್ಟು 9,703 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.106.4 %ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 7,537 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 102.3 %ರಷ್ಟು ಹಾಗೂ ನಗರ ಪ್ರದೇಶದಲ್ಲಿ 2,166 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.123.10 %ರಷ್ಟು ಪ್ರಗತಿ ಸಾಧಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕು:- ಒಟ್ಟು 11,991 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು,
ಒಟ್ಟು ಶೇ.111.50% ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11,667 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 110.90%ರಷ್ಟು ನಗರ ಪ್ರದೇಶದಲ್ಲಿ 324 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.135.00% ರಷ್ಟು ಪ್ರಗತಿ ಸಾಧಿಸಲಾಗಿದೆ.
ವಿರಾಜಪೇಟೆ ತಾಲ್ಲೂಕು:- ಒಟ್ಟು 13,042 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು
ಶೇ.101.70% ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11,896 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.0%ರಷ್ಟು ನಗರ ಪ್ರದೇಶದಲ್ಲಿ 1,146 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.89.80% ರಷ್ಟು ಪ್ರಗತಿ ಸಾಧಿಸಲಾಗಿದೆ.