ಜೂ.28ರಂದು ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಮಡಿಕೇರಿ ಜೂ.27:-ಪಲ್ಸ್ ಪೊಲಿಯೋ ಅಭಿಯಾನ ಸಂಬಂಧ ಜೂನ್, 28 ರಂದು ಬೆಳಗ್ಗೆ 8 ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಜಿಲ್ಲಾ ಆಸ್ಪತ್ರೆ) ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಹನಿ ನೀಡುವ ಮೂಲಕ ಚಾಲನೆ ದೊರೆಯಲಿದ್ದು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

