ಮಾಲಂಬಿ ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಮಾಲಂಬಿ ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಮಾಲಂಬಿ, ಜೂನ್ 28: ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು. ಸಮುದಾಯ ಆರೋಗ್ಯ ಅಧಿಕಾರಿ ಅನುಷಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಮೀನಾಕ್ಷಿ, ಅಂಗನವಾಡಿ ಶಿಕ್ಷಕಿಯರಾದ ಕಾವ್ಯಾ, ರಾಜೇಶ್ವರಿ ಹಾಗೂ ಪೋಷಕರು ಉಪಸ್ಥಿತರಿದ್ದರು.