ಕರ್ಣಂಗೇರಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಕರ್ಣಂಗೇರಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಕೆ.ನಿಡುಗಣೆ, ಜೂ. 26: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮಾಜಿ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ ದೀಪ ಬೆಳಗಿಸಿ ಚಾಲನೆ ನೀಡಿದರು.

 ಗ್ರಾಮದಲ್ಲಿ 0-5 ವರ್ಷದೊಳಗಿನ 36 ಮಕ್ಕಳಿದ್ದು, ಎಲ್ಲ ಪೋಷಕರು ಮೊಣಕಾಲ್ಮುರಿ, ಉಕ್ಕುಡ ಅಥವಾ ರಾಜರಾಜೇಶ್ವರಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಾನ್ಸನ್ ಪಿಂಟೋ ಕರೆ ನೀಡಿದರು.

ಈ ವೇಳೆ ಪೋಲಿಯೋ ಲಸಿಕೆಯ ಮಹತ್ವದ ಬಗ್ಗೆ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಜಯಂತಿ, ಮೀನಾ, ಆರೋಗ್ಯ ಇಲಾಖೆ ಸಿಬ್ಬಂದಿ, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.