Kodagu

ಸತತ ಎರಡನೇ ವರ್ಷ ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಾಫೆಲ್ಸ್ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಇರ್ಫಾನ್

admincoorgdaily

ಮಡಿಕೇರಿ:ಇತ್ತೀಚೆಗೆ ಗೋಣಿಕೊಪ್ಪಲಿನ ಕಾಪ್ಸ್ ಶಾಲೆಯಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೊಹಮ್ಮದ್ ಇರ್ಫಾನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ರಾಮನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಇರ್ಫಾನ್ ಪ್ರತಿನಿಧಿಸಲಿದ್ದಾರೆ.

ಕಳೆದ ವರ್ಷ ಕೂಡ ಮೊಹಮ್ಮದ್ ಇರ್ಫಾನ್ ಬಿಜಾಪುರದಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಪ್ರತಿನಿಧಿಸಿದ್ದರು. ವಿದ್ಯಾರ್ಥಿಯ ಸಾಧನೆಗೆ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ ಎಂದು ತರಬೇತುದಾರ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.