ರೈನ್ ಫಾರೆಸ್ಟ್ ಚಾಲೆಂಜ್ ಇಂಡಿಯಾ ಚಾಂಪಿಯನ್ ಚೇತನ್ ಚಂಗಪ್ಪ ಅವರನ್ನು ಸನ್ಮಾನಿಸಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ:ಇತ್ತೀಚೆಗೆ ಗೋವಾದಲ್ಲಿ ಮುಕ್ತಾಯಗೊಂಡ ರೈನ್ ಫಾರೆಸ್ಟ್ ಚಾಲೆಂಜ್ ಇಂಡಿಯಾ 4×4 ರಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಭಾರತಕ್ಕೆ ಹೆಮ್ಮೆ ತಂದ, ಕೊಡಗಿನ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಭಾಗದ ನಿವಾಸಿ, ಉದ್ದಾಪಂಡ ಚೇತನ್ ಚಂಗಪ್ಪ ರವರನ್ನು,ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದ ಬಳಿಕ ತಮ್ಮ ಶುಭಾಶಯಗಳು ತಿಳಿಸಿದ ಮಾನ್ಯ ಶಾಸಕರು, ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಸಾಧನೆ ಮಾಡಿ, ನಾಡಿಗೆ ಹಾಗೂ ದೇಶಕ್ಕೆ ಕೀರ್ತಿ ತರುವಂತ ಯಶಸ್ಸು ದೊರಕಲಿ ಎಂದು ಹಾರೈಸಿದರು.