ಕೊಡಗಿಗೆ ಮಳೆ ಹಾನಿ ಪರಿಹಾರ, ಪರಿಶೀಲಿಸಿ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ
ಭಾಗಮಂಡಲ:ಕೊಡಗು ಜಿಲ್ಲೆಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ಭಾಗಮಂಡಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. "ಕೊಡಗಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಂಪೂರ್ಣ ವರದಿ ಸಂಗ್ರಹಿಸಿ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಭರವಸೆ ನೀಡಿದರು.
"ರಾಜ್ಯದ ಜಲಾಶಯಗಳು ಭರ್ತಿಯಾಗಲಿ ಎಂದು ಕೊಡಗಿನ ದೈವ ಭಗಂಡೇಶ್ವರನಿಗೆ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈಗಷ್ಟೇ ಮುಖ್ಯಮಂತ್ರಿಯಾಗಿ ಕಣ್ ಬಿಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕೊಡಗಿಗೆ ವಿಶೇಷ ಪ್ಯಾಕೇಜ್ ಬಗ್ಗೆ ಗಮನ ನೀಡಲಾಗುವುದು" ಎಂದು ತಿಳಿಸಿದರು.
ಚಾಮರಾಜನಗರ ಶೂಟೌಟ್ ಪ್ರಕರಣ ಕುರಿತು ಮಾತನಾಡಿದ ಅವರು, "ಬೇಟೆಗಾರರು ಎಂಬ ಸಂಶಯದ ಮೇಲೆ ನಡೆದ ಮೂವರು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರ ಬಳಿ ಕೋವಿ ಮತ್ತು 2 ಕೆ.ಜಿ. ಮಾಂಸವೂ ಇತ್ತು.ಓರ್ವ ಪರಾರಿಯಾಗಿದ್ದಾರೆ. ತನಿಖೆಯ ನಂತರ ಸ್ಪಷ್ಟತೆ ದೊರಕಲಿದೆ" ಎಂದು ಹೇಳಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
