ಕೊಡಗು ಜಿಲ್ಲೆಯ ಮಳೆ ವಿವರ
ಮಡಿಕೇರಿ ಜೂ.20:-ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.39 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 279.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1048.90 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.50 ಮಿ.ಮೀ. ಕಳೆದ ವರ್ಷ ಇದೇ ದಿನ 10.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 424.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1586.10 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 346.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1083.25 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7.58 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 233.14 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 963.45 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 234 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 965.84 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 159.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 645.84 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 0.50, ಸಂಪಾಜೆ 5.50, ಬಾಳೆಲೆ 2.01 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (20-06-2026) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2825.34 ಅಡಿಗಳು. ಕಳೆದ ವರ್ಷ ಇದೇ ದಿನ 2849.77 ಅಡಿಗಳು. ಇಂದಿನ ನೀರಿನ ಒಳಹರಿವು 237 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3070 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 180 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2041 ಕ್ಯುಸೆಕ್.

