ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ
ಬೆಂಗಳೂರು, ಜೂನ್ 06: ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸದ್ಯ ಸಾಲು ಸಾಲು ಸಭೆಗಳಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದು, ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
