ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ! ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ!

Aug 1, 2025 - 13:58
 0  323
ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ!  ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ!
ಪ್ರಜ್ವಲ್ ರೇವಣ್ಣ

ಬೆಂಗಳೂರು:ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ ಸೈಬರ್‌ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಇದರಿಂದ, ಕಳೆದ 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್, ಮತ್ತೆ ಜೈಲಿನಲ್ಲಿ ದಿನ ಕಳೆಯುವಂತಾಗಿದೆ. ಪ್ರಕರಣದ ಸಂಬಂಧ ಪ್ರಜ್ವಲ್‌ ಪರ ವಕೀಲರು ಮತ್ತು ಸಿಐಡಿಯ ಎಸ್‌ಐಟಿ ಪೊಲೀಸರ ಪರ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದ ಆಲಿಸಿ ಜುಲೈ 18ರಂದು ಕಾಯ್ದಿರಿಸಿದ್ದ ಅಂತಿಮ ತೀರ್ಪನ್ನು ಶುಕ್ರವಾರ ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ್ ಭಟ್ ಅವರಿದ್ದ ಪೀಠ, ಪ್ರಜ್ವಲ್ ಅವರನ್ನು ದೋಷಿ ಎಂದು ಘೋಷಿಸಿದೆ. ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 1
Sad Sad 0
Wow Wow 0