ಅತ್ಯಾಚಾರ ಪ್ರಕರಣ:ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಪ್ರಕರಣ:ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
ಪ್ರಜ್ವಲ್ ರೇವಣ್ಣ

ಬೆಂಗಳೂರು: ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಸೆರೆವಾಸ ವಿಧಿಸಿ ಬೆಂಗಳೂರಿನ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 376(2)(ಕೆ) ಅಪರಾಧಕ್ಕೆ ಜೀವಾವಧಿ ಶಿಕ್ಷೆ ಹಾಗೂ ಹಾಗೂ 5 ಲಕ್ಷ ರೂ. ದಂಡ, 376(2)(ಎನ್) ಅಪರಾಧಕ್ಕೆ ಜೀವನ ಪರ್ಯಂತ ಸೆರೆವಾಸ ಹಾಗೂ 5 ಲಕ್ಷ ರೂ. 5 ಲಕ್ಷ ರೂ. ದಂಡ ವಿಧಿಸಿರುವ ನ್ಯಾಯಾಲಯ, ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆ ವಿಧಿಸಿದೆ. ಜತೆಗೆ, ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರವನ್ನು ನ್ಯಾಯಾಲಯ ಘೋಷಿಸಿದೆ.