ಕುಟ್ಟ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ಹೋಂಸ್ಟೇ ಮಾಲೀಕನಿಗೆ ಐದು ಲಕ್ಷ ರೂ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Jul 16, 2026 - 11:11
 0  527
ಕುಟ್ಟ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ಹೋಂಸ್ಟೇ ಮಾಲೀಕನಿಗೆ ಐದು ಲಕ್ಷ ರೂ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
AI image

ಬೆಂಗಳೂರು: ಕೊಡಗು‌‌ ಜಿಲ್ಲೆಯ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ಅಮೆರಿಕದ ಪ್ರವಾಸಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಹೋಂಸ್ಟೇ ಮಾಲೀಕರನ್ನು ಅಕ್ರಮವಾಗಿ ಬಂಧಿಸಿದ್ದಕ್ಕಾಗಿ ಅವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಬುಧವಾರ ಆದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಅಮೆರಿಕ ಪ್ರಜೆಯ ಮೇಲೆ ಅತ್ಯಾಚಾರ ಪ್ರಕರಣ ಎಫ್‌ಐಆರ್ ರದ್ದು ಕೋರಿ ಹೋಂಸ್ಟೇ ಮಾಲೀಕ ಪಿ.ಪೊನ್ನಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ಮಾಡಿದೆ. ಆದರೆ, ಈ ಹಂತದಲ್ಲಿ ಅರ್ಜಿದಾರರ ವಿರುದ್ಧ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ನ್ಯಾಯಾಲಯ, ತನಿಖೆ ಮುಂದುವರಿಯುವುದು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, "ಪ್ರಕರಣ ತನಿಖೆಯ ಹಂತದಲ್ಲಿರುವಾಗ ಹಸ್ತಕ್ಷೇಪದ ಅಗತ್ಯವಿಲ್ಲ. ಹಾಗಾಗಿ, ಅಪರಾಧ ಪ್ರಕರಣವನ್ನು ರದ್ದುಗೊಳಿಸುವ ಮನವಿ ಸ್ವೀಕಾರಾರ್ಹವಾಗಿದೆ. ಅರ್ಜಿದಾರರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಲಾಗುತ್ತಿದೆ. ಅರ್ಜಿದಾರರು ಅಂತಹ ಅಕ್ರಮ ಬಂಧನಕ್ಕೆ ಪರಿಹಾರ ಪಡೆಯಲು ಅರ್ಹರಾಗುತ್ತಾರೆ. ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಅನುಮತಿಸಲಾಗಿದೆ. ಅರ್ಜಿದಾರರು ಲಕ್ಷ ರೂ. ಪರಿಹಾರಕ್ಕೆ ಅರ್ಹರಾಗಿದ್ದಾರೆ. ಆದೇಶದ ಪ್ರತಿ ಸ್ವೀಕರಿಸಿದ 4 ವಾರಗಳಲ್ಲಿ ರಾಜ್ಯ ಸರಕಾರವು ಅರ್ಜಿದಾರರಿಗೆ ಪರಿಹಾರ ಪಾವತಿಸಬೇಕು,'' ಎಂದು ಆದೇಶ ನೀಡಿದೆ.

What's Your Reaction?

Like Like 0
Dislike Dislike 0
Love Love 1
Funny Funny 1
Angry Angry 0
Sad Sad 0
Wow Wow 0