ರಾಜ್ಯದಲ್ಲಿ ಮರು ಜಾತಿಗಣತಿ ದಿನಾಂಕ ಫಿಕ್ಸ್

ಬೆಂಗಳೂರು:ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರ ವರೆಗೆ 15 ದಿನಗಳ ಕಾಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.