ಮೇ 05ರಿಂದ 8ರವರಗೆ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ಸ್ವಾಮಿ ಹಾಗೂ ಗುಣಪತಿ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ
admincoorgdaily

ಮಡಿಕೇರಿ: ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ಸ್ವಾಮಿ ಹಾಗೂ ಗುಣಪತಿ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಮೇ೫ ರಿಂದ ೮ ರವರೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್ ತಿಳಿಸಿದ್ದಾರೆ.
ಕೇರಳದ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ ೫ರಿಂದ ವಿವಿಧ ಪೂಜಾಕೈಂಕರ್ಯ ವಿಧಿವಿಧಾನಗಳು ನಡೆಯಲಿದೆ. ಮೇ೮ರಂದು ಬೆಳಿಗ್ಗೆ ೭.೨೮ಕ್ಕೆ ಪ್ರತಿಷ್ಠೆ, ೧೧.೪೭ಕ್ಕೆ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ ನಡೆಯಲಿದೆ. ಮೇ೮ರಂದು ಶಂಭುನಾಥ ಸ್ವಾಮೀಜಿ, ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸಂಸದ ಯದುವೀರ್ ಒಡೆಯರ್, ಶಾಸಕ ಎ.ಎಸ್.ಪೊನ್ನಣ್ಣ, ಎಂಎಲ್‌ಸಿ ಸುಜಾ ಕುಶಾಲಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೋಮಣ್ಣ, ಉಪಾಧ್ಯಕ್ಷ ಅಪ್ಪಯ್ಯ, ಪ್ರಮುಖರಾದ ಗಿರೀಶ್, ಸುಗುಣಕುಮಾರ್ ಇದ್ದರು.