Kodagu

ಆ.07 ರಂದು ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ನೇಮಕಾತಿ

admincoorgdaily

ಆ.07 ರಂದು ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ ಆ.04:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 07 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನೇರ ಸಂದರ್ಶನ’ ನಡೆಯಲಿದೆ.

ಈ ನೇರ ಸಂದರ್ಶನದಲ್ಲಿ ಡೊಬರ್ಮನ್ ಸೆಕ್ಯೂರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಸಂಸ್ಥೆಯು, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಫೀಲ್ಡ್ ಆಫೀಸರ್, ಫೀಲ್ಡ್ ಇನ್ವೆಸ್ಟಿಗೇಟರ್ ಹಾಗೂ ಆಡಳಿತ ಸಿಬ್ಬಂದಿ, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಹತೆಗಳು ಪಿಯುಸಿ ಅಥವಾ ಪದವಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮತ್ತು ಕಂಪ್ಯೂಟರ್ ಜ್ಞಾನ, ಹೊಂದಿರುವಂತಹ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು.

ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.