ಜು.29 ರಂದು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ

Jul 24, 2026 - 23:12
 0  1
ಜು.29 ರಂದು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ

ಮಡಿಕೇರಿ ಜು.24:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 29 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಐಸಿಐಸಿಐ ಬ್ಯಾಂಕ್, ಬೆಂಗಳೂರು, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥರವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0