ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಕಂಬಗಳು ಕಂಡು ಬಂದರೆ ದೂರು ನೀಡಿ

Jan 18, 2026 - 11:52
Jan 18, 2026 - 11:53
 0  181
ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಕಂಬಗಳು ಕಂಡು ಬಂದರೆ ದೂರು ನೀಡಿ

ಮಡಿಕೇರಿ ಜ.17:-ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳಲ್ಲಿ ಮರಗಿಡಗಳ ಮಧ್ಯದಲ್ಲಿ ಹಾದು ಹೋಗಿದ್ದು, ಮರಗಳ ರೆಂಬೆ ಕೊಂಬೆಗಳ ಬೀಳುವಿಕೆಯಿಂದಾಗಿ ಕಂಬಗಳು ಬಾಗಿ, ತಂತಿಗಳು ಕೆಳಮಟ್ಟಕ್ಕಿಳಿದು ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ.

ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಲು ಕೋರಲಾಗಿದೆ. ತೋಟಗಳಲ್ಲಿ ಕಾಳುಮೆಣಸು ಕೀಳಲು ಮತ್ತು ಮರದ ಕೊಂಬೆಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಅಲ್ಯೂಮಿನಿಯಂ/ ಕಬ್ಬಿಣದ ಏಣಿ ಬದಲು ಬಿದಿರು/ಫೈಬರ್ ಏಣಿಗಳನ್ನೇ ಉಪಯೋಗಿಸಿ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಇಲಾಖೆಯೊಂದಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0