ಜಿಲ್ಲಾಡಳಿತದಿಂದ‌ ಗಣರಾಜ್ಯೋತ್ಸವ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಎನ್ಎಸ್ ಭೋಸರಾಜು

Jan 26, 2026 - 10:01
 0  251
ಜಿಲ್ಲಾಡಳಿತದಿಂದ‌ ಗಣರಾಜ್ಯೋತ್ಸವ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಎನ್ಎಸ್ ಭೋಸರಾಜು

ಮಡಿಕೇರಿ ಜ.26- ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್, ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಲೋಕಾಯುಕ್ತ ಎಸ್ ಪಿ. ದಿನೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0