ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿ ನೀಡಲು ಮನವಿ

Nov 21, 2025 - 23:17
 0  572
ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿ ನೀಡಲು ಮನವಿ

ಮಡಿಕೇರಿ:-ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ಧಾಣಗಳ ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025 ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮುಖ್ಯಾಧಿಕಾರಿ/ಪೌರಾಯುಕ್ತರಿಗೆ ತಿಳಿಸುವುದು. ತಮ್ಮ ಸಂಸ್ಥೆಯ ಆವರಣದಲ್ಲಿ ನೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು.

ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗು ಅವುಗಳ ಪ್ರವೇಶ ನಿರ್ಭಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಮಾನ್ಯ ಸರ್ವೋಚ್ಛ ಬ್ಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು.

 ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುವುದು ಎಂದು ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 2