ನಾಪೋಕ್ಲುವಿನ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ.ಪಿ. ಜ್ಯೋತಿಗೆ ಪಂಚಾಯತ್ ವತಿಯಿಂದ ಸನ್ಮಾನ

Jan 1, 2026 - 16:00
 0  359
ನಾಪೋಕ್ಲುವಿನ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ.ಪಿ. ಜ್ಯೋತಿಗೆ ಪಂಚಾಯತ್ ವತಿಯಿಂದ ಸನ್ಮಾನ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಂ.ಪಿ.ಜ್ಯೋತಿ ಅವರನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ನಾಪೋಕ್ಲುವಿನ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 36 ವರ್ಷಗಳ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ಜ್ಯೋತಿ ಅವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಇವರ ಅವಧಿಯಲ್ಲಿ ನೀಡಿರುವ ಉತ್ತಮ ಸೇವೆನ್ನು ಗುರುತಿಸಿ ನಾಪೋಕ್ಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾದ ಸರಳ ಕಾರ್ಯಕ್ರಮದಲ್ಲಿ ಜ್ಯೋತಿ ಅವರನ್ನು ಪಂಚಾಯಿತಿ ವತಿಯಿಂದ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

 ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್,ಪಂಚಾಯತ್ ಸದಸ್ಯರಾದ ಕುಶು ಕುಶಾಲಪ್ಪ, ಬಿ. ಎಂ. ಪ್ರತೀಪ, ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ,ಕಂದಾಯ ಪರಿವೀಕ್ಷಕರ ರವಿಕುಮಾರ್, ನಾಪೋಕ್ಲು ಠಾಣೆಯ ಸಹಾಯಕ ಠಾಣಾಧಿಕಾರಿ ಮೋಹನ್, ಸಿಬ್ಬಂದಿ ಜೋಸೆಫ್, ಸ್ವಸಹಾಯ ಸಂಘದ ಅಧ್ಯಕ್ಷೆ ಟಿ.ವಿ.ಭವಾನಿ, ಸಂಚಾಲಕಿ ಆಶಲತಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು, ವಿವಿಧ ಶಾಲೆಯ ಶಿಕ್ಷಕರು, ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0