ಪೊನ್ನಂಪೇಟೆ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಪೊನ್ನಂಪೇಟೆ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಪೊನ್ನಂಪೇಟೆ: ತಾಲೂಕಿನ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣದ ಶಿಲನ್ಯಾಸ ಕಾರ್ಯಕ್ರಮದಲ್ಲಿ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರೊಂದಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

ಇತ್ತೀಚಿಗಷ್ಟೇ ನೂತನ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದ ಬಳಿಕ, ಪೊನ್ನಂಪೇಟೆ ತಾಲೂಕಿನ ವಿವಿಧ ಆಡಳಿತ ಕಟ್ಟಡಗಳ ನಿರ್ಮಾಣ/ಮೇಲ್ದರ್ಜೆ ಕಾಮಗಾರಿಗಳಿಗೆ ಶಾಸಕರು ಸರಕಾರದಿಂದ 8ಕೋಟಿ 60ಲಕ್ಷ ಅನುದಾನ ಒದಗಿಸುತ್ತಿದ್ದಾರೆ. ಅದರಂತೆ ಇಂದು ಮಾನ್ಯ ಕಂದಾಯ ಸಚಿವರೊಂದಿಗೆ ತಾಲೂಕು ಕಚೇರಿ ಕಟ್ಟಡಕ್ಕೆ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದರು.

 ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಶ್ರೀ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪ್ರಶಾಂತ್ ಕಾಳಿಮಾಡ, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಉಪಾಧ್ಯಕ್ಷರಾದ ಅಲಿರ ರಶೀದ್,ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಿತ ಅಧ್ಯಕ್ಷರುಗಳು, ಆಹ್ವಾನಿತ ಗಣ್ಯರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.