ಚೇರಂಡ ಐನ್ ಮನೆಗೆ ತೆರಳುವ ರಸ್ತೆ ಕಾಮಗಾರಿ ಪೂರ್ಣ

ಚೇರಂಡ ಐನ್ ಮನೆಗೆ ತೆರಳುವ ರಸ್ತೆ ಕಾಮಗಾರಿ ಪೂರ್ಣ

ಪೊನ್ನಂಪೇಟೆ: ಚೇರಂಡ ಐನ್ ಮನೆ ಮುಖ್ಯಸ್ಥರ ಕೋರಿಕೆ ಮೇರೆಗೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೂತನ ರಸ್ತೆ ನಿರ್ಮಾಣ ಮಾಡಲು ಅನುದಾನ ಒದಗಿಸಿದ್ದರು. ಈಗ ಈ ಕಾಮಗಾರಿಯೂ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಸಜ್ಜಾಗಿದೆ.

ತಮ್ಮ ಬೇಡಿಕೆಗೆ ಅತ್ಯಂತ ಪ್ರಾಮುಖ್ಯತೆ ನೀಡಿ, ಅನುದಾನ ಒದಗಿಸಿ ಕೆಲಸ ಪೂರ್ಣಗೊಳಿಸುವಲ್ಲಿ ಸಹಕರಿಸಿದ ಶಾಸಕರಿಗೂ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್ ರವರಿಗೂ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಚೇರಂಡ ಮೋಹನ್ ರವರಿಗೆ ಕುಟುಂಬದ ಮುಖ್ಯಸ್ಥರು ಹಾಗೂ ಸರ್ವರೂ ಕೃತಜ್ಞತೆ ಸಲ್ಲಿಸಿದ್ದಾರೆ.