Kodagu

ಕಣಿವೆ ರಾಮಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

admincoorgdaily

ಕಣಿವೆ ರಾಮಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಕುಶಾಲನಗರ, ಜೂನ್ 29: ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಣಿವೆ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂ. ಅನುದಾನ ಮಂಜೂರಾಗಿದೆ. ಶೀಘ್ರದಲ್ಲೇ ಮೂಲಸೌಕರ್ಯ ಕಾಮಗಾರಿಗಳು ಆರಂಭವಾಗಲಿವೆ ಎಂದು ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.

 ನಿತ್ಯ ನೂರಾರು ಭಕ್ತರು ಭೇಟಿ ನೀಡುವ ಈ ದೇವಸ್ಥಾನದಲ್ಲಿ ಸೂಕ್ತ ವಿಶ್ರಾಂತಿ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಇಲ್ಲದೆ ಭಕ್ತರು ಪರದಾಡುತ್ತಿದ್ದರು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರು. "ಕಣಿವೆ ದೇವಸ್ಥಾನ ನಮ್ಮ ಭಾಗದ ಪ್ರಮುಖ ಧಾರ್ಮಿಕ ಕೇಂದ್ರ. ಭಕ್ತರಿಗೆ ತೊಂದರೆಯಾಗದಂತೆ ಎಲ್ಲಾ ಮೂಲಸೌಕರ್ಯ ಕಲ್ಪಿಸಲಾಗುವುದು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ" ಎಂದರು.