ಬ್ಯಾನರ್ ಅಳವಡಿಕೆ ವಿಚಾರಕ್ಕೆ ಗಲಾಟೆ | ಜನಾರ್ದನ ರೆಡ್ಡಿ ಮನೆ ಎದುರು ಫೈರಿಂಗ್: ಕಾಂಗ್ರೆಸ್ ಕಾರ್ಯಕರ್ತ ಮೃತ್ಯು 

Jan 1, 2026 - 23:57
 0  834
ಬ್ಯಾನರ್ ಅಳವಡಿಕೆ ವಿಚಾರಕ್ಕೆ ಗಲಾಟೆ | ಜನಾರ್ದನ ರೆಡ್ಡಿ ಮನೆ ಎದುರು ಫೈರಿಂಗ್: ಕಾಂಗ್ರೆಸ್ ಕಾರ್ಯಕರ್ತ ಮೃತ್ಯು 

ಬಳ್ಳಾರಿ, ಜ. 1: ನಗರದಲ್ಲಿ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಎದುರು ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ.

ಫೈರಿಂಗ್‌ನಲ್ಲಿ ಗಾಯಗೊಂಡ ರಾಜಶೇಖರ್ ಎಂಬ ಕಾರ್ಯಕರ್ತನನ್ನು ತಕ್ಷಣ ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ವಿವರ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೈರಿಂಗ್ ನಡೆದ ಸಂದರ್ಭದ ಹಿನ್ನೆಲೆ, ಗಲಾಟೆಗೆ ನಿಖರ ಕಾರಣ ಹಾಗೂ ಗುಂಡು ಹಾರಿಸಿದವರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 1
Sad Sad 1
Wow Wow 0