ಶಟಲ್ ಬ್ಯಾಡ್ಮಿಂಟನ್ ನಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆಯ ರಯಾನ್ ಪೆಮ್ಮಯ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಶಟಲ್ ಬ್ಯಾಡ್ಮಿಂಟನ್ ನಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆಯ ರಯಾನ್ ಪೆಮ್ಮಯ್ಯ ರಾಜ್ಯಮಟ್ಟಕ್ಕೆ ಆಯ್ಕೆ

ವರದಿ:ಝಕರಿಯ ನಾಪೋಕ್ಲು

 ನಾಪೋಕ್ಲು :ಕುಶಾಲನಗರದಲ್ಲಿ ನಡೆದ 17 ವರ್ಷ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿಗಳ ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪೊರುಕೊಂಡ ರಯಾನ್ ಪೆಮ್ಮಯ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಶಾಲನಗರದ ಜಂಪ್ ಸ್ಮ್ಯಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯದ ಎಂಟು ಜಿಲ್ಲೆಗಳ ತಂಡಗಳು ಪಾಲ್ಗೊಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಪರ ಆಡಿ ಜಯಗಳಿಸಿರುವ ರಯಾನ್ ಪೆಮ್ಮಯ್ಯ ನ.17 ರಂದು ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಅಧ್ಯಕ್ಷರು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.