ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಸ್‌ಇಎ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯ ನಡೆಸಿದ 2026ನೇ ಸಾಲಿನ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯಲ್ಲಿ ಪೆರುಂಬಾಡಿಯ ಸಂಶುಲ್ ಉಲಮ ಎಜುಕೇಶನ್ ಅಕಾಡೆಮಿಯ ಎಸ್‌ಇಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 3 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.. ಎಸ್ ಈ ಎ ಕಾಲೇಜು ಪ್ರಾಂಶುಪಾಲೆ ಭಾನುಮತಿ ಮಾತನಾಡಿ ವಿದ್ಯಾರ್ಥಿಗಳ ಪರಿಶ್ರಮ, ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನ ಮತ್ತು ಪೋಷಕರ ನಿರಂತರ ಸಹಕಾರವೇ ಈ ಯಶಸ್ಸಿನ ಪ್ರಮುಖ ಕಾರಣವಾಗಿದೆ ಹಲವು ವರ್ಷಗಳಿಂದಲೂ ವಿವಿಧ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ತಾಲೂಕು, ಜಿಲ್ಲೆ, ರಾಜಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ಪ್ರತಿಭಾನ್ವಿತರಾಗಿ ಉನ್ನತ ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಹೆಚ್ಚಿನ ಸಹಕಾರ ನೀಡಬೇಕೆಂದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ ಮಾತನಾಡಿ ಹೆಣ್ಣುಮಕ್ಕಳ ಶಿಕ್ಷಣ ಕಲಿಕೆಗೆ ಪೂರಕವಾದ ವಾತಾವರಣವಿದ್ದು ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸಲು ಉಪನ್ಯಾಸಕರು ಮುಂದಾಗಿದ್ದು ಶಾಲಾ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಕಲಿಕೆಯ ಮೂಲಕ ಸಾಧನೆ ಮಾಡುವುದರೊಂದಿಗೆ ಉನ್ನತ ಶಿಕ್ಷಣದ ಮೂಲಕ ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಈ ಸಂದರ್ಭ ಕಾಲೇಜು ಆಡಳಿತ ಮಂಡಳಿಯ ಪ್ರಮುಖರು, ಉಪನ್ಯಾಸಕರು, ಶಿಕ್ಷಕರುಗಳು, ಪೋಷಕರು ಹಾಜರಿದ್ದರು
What's Your Reaction?
Like
1
Dislike
0
Love
1
Funny
0
Angry
0
Sad
0
Wow
1
