ಎಸ್ಐಆರ್: ಕೊಡಗು ಜಿಲ್ಲೆಯಲ್ಲಿ 11,850 ಮಂದಿ ಮರಣವೊಂದಿದ ಮತದಾರರು ಪತ್ತೆ
ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - SIR ಕಾರ್ಯ ಭರದಿಂದ ಸಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ಪ್ರಕಾರ, ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 552 ಮತಗಟ್ಟೆ ಗಳಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯವು ಶೇ.100 ರಷ್ಟು ಪೂರ್ಣಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 4,68,657 ಮತದಾರರಿಗೆ ಗಣತಿ ನಮೂನೆಯನ್ನು ವಿತರಿಸಲಾಗಿದೆ. ಇದರಲ್ಲಿ ಇದುವರೆಗೆ 3,55,185 ನಮೂನೆಗಳನ್ನು BLO App ನಲ್ಲಿ ಡಿಜಿಟಲೀಕರಣ ಮಾಡಲಾಗಿದ್ದು, ಇದು ಶೇ.75.79ರಷ್ಟಾಗಿದೆ. ಶಾಶ್ವತವಾಗಿ ಸ್ಥಳಾಂತರ 22,097, ಮೃತಪಟ್ಟ ಮತದಾರರು11,850, Absent 4,727 ,ಎರಡು ಕಡೆ ಹೆಸರು ಹೊಂದಿರುವವರು 3,055, ಇತರೆ ಕಾರಣಗಳು 65
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
