SIR-2026: ಸೋಮವಾರಪೇಟೆಯಲ್ಲಿ ಬೈಕ್ ಜಾಥಾ ಮೂಲಕ ಮತದಾರರ ಜಾಗೃತಿ, ಹಾಡಿ, ಶಾಲೆ, ವಿಕಲಚೇತರ ಮನೆಗೆ ತೆರಳಿ ಅರ್ಜಿ ಭರ್ತಿ
ಸೋಮವಾರಪೇಟೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ SIR-2026 ಕುರಿತು ಜಾಗೃತಿ ಮೂಡಿಸಲು ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದಲ್ಲಿ ಗುರುವಾರ ಬೈಕ್ ಜಾಥಾ ಹಮ್ಮಿಕೊಳ್ಳಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ತಾ.ಪಂ. ಆವರಣದಿಂದ ಆರಂಭವಾದ ಜಾಥಾದಲ್ಲಿ SIR ಕುರಿತ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ತಾ.ಪಂ. ಇಒ ಪರಮೇಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾ.ಪಂ. ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಮತ್ತು ರಾಕೇಶ್, ತಾ.ಪಂ. ಸಿಬ್ಬಂದಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

