ಎಸ್.ಐ.ಆರ್ ಪ್ರಕ್ರಿಯೆ: ಕಾಂಗ್ರೆಸ್ ವಾರ್ ರೂಂ ಅಧ್ಯಕ್ಷರಾಗಿ ತೆನ್ನಿರ ಮೈನಾ ನೇಮಕ
admincoorgdaily

ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್.ಐ.ಆರ್) ಪ್ರಕ್ರಿಯೆ ಗೆ ಸಂಭಂದಿಸಿದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ವಾರ್ ರೂಂ ಅಧ್ಯಕ್ಷರನ್ನಾಗಿ ಕೆ.ಪಿ.ಸಿ.ಸಿ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪನವರು ನೇಮಕಾತಿ ಆದೇಶ ನೀಡಿದ್ದಾರೆ.
ಕೊಡಗು ಜಿಲ್ಲೆಯ ಎರಡು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಎಲ್.ಎ 2 ಮತ್ತು ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ತಮ್ಮ ಆದೇಶ ಪತ್ರದಲ್ಲಿ ಸೂಚನೆ ನೀಡಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮದ್,ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ನೇಮಕಾತಿ ಆದೇಶ ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.