ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಎಸ್.ಐ.ಆರ್ ಕಾರ್ಯಾಗಾರ

Jun 23, 2026 - 15:41
 0  159
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಎಸ್.ಐ.ಆರ್ ಕಾರ್ಯಾಗಾರ

ಮಡಿಕೇರಿ; ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಬಿ.ಎಲ್.ಎ 2 ರವರಿಗೆ ಎಸ್.ಐ.ಆರ್ ಕುರಿತು ತರಬೇತಿ ಕಾರ್ಯಾಗಾರ ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿ ಸಭಾಂಗಣದಲ್ಲಿ ನಡೆಯಿತು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕೃಯೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ 2 ಗಳು ಯಾವ ರೀತಿ ಜಾಗೃತಿಯಿಂದ ಕೆಲಸ ಮಾಡಬೇಕು ಎಂಬುದರ ಬಗ್ಗೆ ಕರ್ನಾಟಕ ಜಾಗೃತಿ ಸಮಿತಿಯ ನಿರ್ದೇಶಕರಾದ ಮೋಹನ್ ರವರು ಸಂಕ್ಷಿಪ್ತವಾಗಿ ವಿವರಣೆ ನೀಡಿದರು.

 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ನವರು ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ ಗಳು ಅತ್ಯಂತ ಕ್ರಿಯಾತ್ಮಕವಾಗಿ ಜವಾಬ್ದಾರಿ ನಿಭಾಯಿಸುವಂತೆ ಸೂಚನೆ ನೀಡಿದರು.

ಎಸ್.ಐ.ಆರ್ ಕಾರ್ಯಕ್ರಮದ ಮೈಸೂರು ಕೊಡಗು ವಿಭಾಗದ ಕಾಂಗ್ರೆಸ್ ಉಸ್ತುವಾರಿಗಳಾದ ಎಂ.ಲಕ್ಷಣ್ ರವರು ಎಸ್.ಐ.ಆರ್ ಕಾರ್ಯಕ್ರಮವನ್ನು ಬಿಜೆಪಿ ಯವರು ದೇಶದ ವಿವಿಧ ಭಾಗಗಳಲ್ಲಿ ದುರುಪಯೋಗ ಪಡಿಸಿಕೊಂಡಿದ್ದು ಕರ್ನಾಟಕದಲ್ಲಿ ಎಚ್ಚರಿಕೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ಇರಬೇಕು ಎಂದು ಕರೆ ನೀಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ,ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕೊಕ್ಕಲೆರ ಸುಜು ತಿಮ್ಮಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ,ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಸೇರಿದಂತೆ 68 ಬೂತ್ ಗಳ ಬಿ.ಎಲ್.ಎ 2 ಮತ್ತು ಮುಖಂಡರು ಕಾರ್ಯಾಗಾರದಲ್ಲಿ ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0