ಪತ್ರಿಕೋದ್ಯಮ ಸಾಧನೆಯ ರಾಜ್ಯ ಪ್ರಶಸ್ತಿಗೆ ಎಸ್ಎಂ ಮುಬಾರಕ್ ಆಯ್ಕೆ
ಮಡಿಕೇರಿ:- ಕರ್ನಾಟಕ ತಮಿಳು ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ 5ನೇ ವರ್ಷದ ತಮಿಳು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಅಂಗವಾಗಿ ತಮಿಳು ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ಗುರುತಿಸಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು ಕೊಡಗು ಜಿಲ್ಲೆಯ ಸಿದ್ದಾಪುರದ ಹಿರಿಯ ಪತ್ರಕರ್ತ ಎಸ್ ಎಂ ಮುಬಾರಕ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 20 ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಬಹುಭಾಷಾ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದಾರೆ. ಜಿಲ್ಲೆ ,ರಾಜ್ಯ ,ರಾಷ್ಟ್ರೀಯ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಎಸ್ಎಂ ಮುಬಾರಕ್ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿರುವ ಇವರಿಗೆ ವಿವಿಧ ಸಂಘ ಸಂಸ್ಥೆಗಳಿಂದಲೂ ಸನ್ಮಾನ ಗೌರವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಫೆ 7 ರಂದು (ಇಂದು) ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಸ್ಟ್ಸ್ ಸಂಸ್ಥೆಯ ಸಭಾಂಗಣದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ತಮಿಳು ಪತ್ರಕರ್ತರ ಸಂಘದ ಅಧ್ಯಕ್ಷ ಮುತ್ತುಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
