ಜ.10ರಂದು ಎಸ್.ಆರ್.ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ
ಮಡಿಕೇರಿ: ಹಳೆಯ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುವ ಸಲುವಾಗಿ ಶ್ರೀ ರಾಜೇಶ್ವರಿ ವಿದ್ಯಾಲಯ ಮತ್ತು ಹಳೆ ವಿದ್ಯಾರ್ಥಿ ಸಂಘದಿಂದ ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ೨೦೨೬ರ ಜ.೧೦ ಮತ್ತು ೧೧ ರಂದು ನಗರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಮ್ಯಾನೆಜಿಂಗ್ ಟ್ರಸ್ಟಿ ಮತ್ತು ಕಾರ್ಯದರ್ಶಿ ಸಚಿನ್ ವಾಸುದೇವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡಿದ್ದಾರೆ. ಅವರನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಕ್ರೀಡಕೂಟ ಹಮ್ಮಿಕೊಳ್ಳಲಾಗುತ್ತಿದೆ. ಸಂಘದ ಸದಸ್ಯರಿಗಾಗಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ.
ಮುಕ್ತವಾಗಿ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ೧೬ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಶಾಲಾ ಮಟ್ಟದಲ್ಲಿ ಫುಟ್ಬಾಲ್ ಪಂದ್ಯಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀ ರಾಜೇಶ್ವರಿ ವಿದ್ಯಾಲಯ ಅಧ್ಯಕ್ಷ ಗೋವಿಂದರಾಜ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಕರ್ಕೆರ, ಖಜಾಂಚಿ ನಿವ್ಯ ಕಾವೇರಮ್ಮ, ನಿರಂಜನ್, ಸದಸ್ಯರಾದ ಚರಣ್ ಕುಮಾರ್ ಇದ್ದರು.
