Kodagu

ಎಸ್.ಎಸ್.ಎಲ್.ಸಿ‌ ವಾರ್ಷಿಕ ಪರೀಕ್ಷೆಯಲ್ಲಿ ತೋಳೂರು ಶೆಟ್ಟಳ್ಳಿ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಗೆ ಶೇಕಡಾ 100 ಫಲಿತಾಂಶ

admincoorgdaily

ಎಸ್.ಎಸ್.ಎಲ್.ಸಿ‌ ವಾರ್ಷಿಕ ಪರೀಕ್ಷೆಯಲ್ಲಿ ತೋಳೂರು ಶೆಟ್ಟಳ್ಳಿ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಗೆ ಶೇಕಡಾ 100 ಫಲಿತಾಂಶ

ಕುಶಾಲನಗರ;2025- 26 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಗೆ ಶೇಕಡಾ 100 ಫಲಿತಾಂಶ ಬಂದಿರುತ್ತದೆ.

 ಈ ಶಾಲೆಯ ಎಲ್ಲಾ 45 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ. 100% ಫಲಿತಾಂಶ ಪಡೆದುಕೊಂಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ. ಶಾಲೆಯ ವಿದ್ಯಾರ್ಥಿನಿಯಾದ ಕೆ ಎನ್ .ಪುಣ್ಯ , 625 ಅಂಕಗಳಿಗೆ 607 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ,ವಿದ್ಯಾರ್ಥಿನಿ ವಿ.ಸಮೀಕ್ಷಾ , 598 ಅಂಕಗಳು ಹಾಗೂ ಕೆ.ಕೆ. ಇಂಚರ 588 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದಿದ್ದಾರೆ.

 ಎಲ್ಲಾ ವಿದ್ಯಾರ್ಥಿಗಳಿಗೂ , ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕ ಶಿಕ್ಷಕ ಪರಿಷತ್ ನ ಸದಸ್ಯರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.