Kodagu

ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿ ಬಿ.ಆರ್. ಭವಿಷ್‌ಗೆ ಪ್ರತಿಭಾ ಪುರಸ್ಕಾರ ಸನ್ಮಾನ

admincoorgdaily

ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿ ಬಿ.ಆರ್. ಭವಿಷ್‌ಗೆ ಪ್ರತಿಭಾ ಪುರಸ್ಕಾರ ಸನ್ಮಾನ

ವಿರಾಜಪೇಟೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿರಾಜಪೇಟೆಯ ಸಾಧಕ ವಿದ್ಯಾರ್ಥಿ ಬಿ.ಆರ್. ಭವಿಷ್ ಅವರಿಗೆ ಇತ್ತೀಚೆಗೆ ಆತ್ಮೀಯ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಡಿಕೇರಿಯ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ), ಬೆಂಗಳೂರು ಹಾಗೂ ಕೊಡಗು ಜಿಲ್ಲಾ ಈಡಿಗ ಮತ್ತು ಬಿಲ್ಲವ ಘಟಕ (ರಿ), ಮಡಿಕೇರಿ ಇವುಗಳ ಜಂಟಿ ಆಶ್ರಯದಲ್ಲಿ ಈ ಗೌರವ ಸಮರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಎಂ. ಶ್ರೀನಿವಾಸ್ ಹಾಗೂ ಕೊಡಗು ಈಡಿಗ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಕುಮಾರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದು,ಸಾಧಕ ವಿದ್ಯಾರ್ಥಿಯನ್ನು ಹರಸಿ ಸನ್ಮಾನಿಸಿದರು.

ಪ್ರತಿಭಾವಂತ ವಿದ್ಯಾರ್ಥಿ ಬಿ.ಆರ್ ಭವಿಷ್ ಅವರು ವಿರಾಜಪೇಟೆಯ ಪಂಜರಪೇಟೆ ನಿವಾಸಿಗಳಾದ ಬಿ.ಎನ್. ರಮೇಶ್ (ರಘು) ಹಾಗೂ ಆಶಾ ದಂಪತಿಗಳ ಪುತ್ರನಾಗಿದ್ದಾರೆ. ಇವರು ಪ್ರಸ್ತುತ ಗೋಣಿಕೊಪ್ಪದ ಲಯನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.