ಮೇ 22ರಂದು ಎಸ್.ಎಸ್.ಎಲ್.ಸಿಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಪಡೆದ ಪ್ರೌಢಶಾಲೆಗಳಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ
admincoorgdaily

ಮಡಿಕೇರಿ: ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಶೇ ೧೦೦ ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ22ರಂದು ಬೆಳಗ್ಗೆ ೧೦.೩೦ಕ್ಕೆ ಮಡಿಕೇರಿ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕನ್ನಡಸಿರಿ ಸ್ನೇಹ ಬಳಗ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ತಿಳಿಸಿದ್ದಾರೆ.
ಕನ್ನಡಸಿರಿ ಸ್ನೇಹ ಬಳಗ, ಕ.ಸಾ.ಪ ಬಳಗ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಲಿದ್ದಾರೆ. ಶಾಸಕ ಎ.ಎಸ್.ಪೊನ್ನಣ್ಣ, ಪೆರಿಗ್ರಿನ್.ಎಸ್.ಮಚಾಡೊ, ಎಂ.ಡಿ.ರಂಗಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.
ಬಿ.ಎಸ್.ಲೋಕೇಶ್ ಸಾಗರ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಂದು ಅಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ನಾಗರಾಜ್ ಶೆಟ್ಟಿ, ದನಂಜಯ್, ಕೆ.ಎಸ್.ರಮೇಶ್ ಇದ್ದರು.