ಸೆಪ್ಟೆಂಬರ್ 12 ರಿಂದ 15ರವರೆಗೆ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಸೆಪ್ಟೆಂಬರ್ 12 ರಿಂದ 15ರವರೆಗೆ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಮಡಿಕೇರಿ:ಜಿಲ್ಲೆಯ ಮಡಿಕೇರಿ ನಗರದಲ್ಲಿ ಹಾಗೂ ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಬಾಳೆಲೆಯಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ನನಗೆ ದತ್ತವಾಗಿರುವ ಅಧಿಕಾರ ಚಲಾಯಿಸಿ ವೆಂಕಟ್ ರಾಜಾ, ಭಾ.ಆ.ಸೇ., ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದ ನಾನು ಈ ಕೆಳಕಂಡ ಸ್ಥಳ, ದಿನಾಂಕ ಮತ್ತು ಪರಿಮಿತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದೇನೆ.

1. ದಿನಾಂಕ 12-09-2025 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮಡಿಕೇರಿ ನಗರದ ಸುತ್ತ-ಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ.

2. ದಿನಾಂಕ 14-09-2025 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮಡಿಕೇರಿ ನಗರದ ಸುತ್ತ-ಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ,

3. ದಿನಾಂಕ 15-09-2025 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಬಾಳೆಲೆ ಗ್ರಾಮ ಪಂಚಾಯ್ತಿ ಸುತ್ತ-ಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ.