ಹಿಂದೂ ಸಂಗಮ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

Feb 20, 2026 - 16:42
 0  817
ಹಿಂದೂ ಸಂಗಮ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಮಡಿಕೇರಿ ಫೆ.20:-ಕೊಡಗು ಜಿಲ್ಲೆಯ ಮರಗೋಡು, ಚೆಟ್ಟಳ್ಳಿ ಮತ್ತು ಮೂರ್ನಾಡುವಿನಲ್ಲಿ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಫೆಬ್ರವರಿ, 21 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಮರಗೋಡು ಸುತ್ತಮುತ್ತಲಿನ 05 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ

ಫೆಬ್ರವರಿ, 22 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಚೆಟ್ಟಳ್ಲಿ ಮತ್ತು ಮೂರ್ನಾಡು ಸುತ್ತಮುತ್ತಲಿನ 05 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

What's Your Reaction?

Like Like 1
Dislike Dislike 1
Love Love 1
Funny Funny 0
Angry Angry 0
Sad Sad 0
Wow Wow 0