ಸೆಪ್ಟೆಂಬರ್ 02 ಮತ್ತು 04 ರಂದು ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ
admincoorgdaily
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆಯು ನಗರ/ಪಟ್ಟಣಗಳ ಮುಖ್ಯ ರಸ್ತೆಯಲ್ಲಿ ಹಾದು ಹೋಗಲಿದೆ. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು/ಸಾರ್ವಜನಿಕರು ಸೇರಲಿದ್ದು. ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೆರವಣಿಗೆಯ ದಿನಾಂಕದಂದು ಸಂಬಂಧಿತ ಪೊಲೀಸ್ ಠಾಣಾ ಸರಹದ್ದಿನ ಮೆರವಣಿಗೆ ನಡೆಯುವ ಸ್ಥಳದ ಸುತ್ತಮುತ್ತಲು ಮದ್ಯ ನಿಷೇಧಿಸುವಂತೆ ಪೊಲೀಸ್ ಅಧೀಕ್ಷಕಕರು ಕೋರಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸದರಿ ದಿನಾಂಕಗಳಂದು ಮದ್ಯ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಈ ಕೆಳಗಿನಂತೆ ಆದೇಶ ಹೊರಡಿಸಿದೆ.
.ದಿನಾಂಕ 02-09-2025 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಕುಶಾಲನಗರ ಗ್ರಾಮಾಂತರ ಠಾಣಾ ಗುಡ್ಡೆ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ. ದಿನಾಂಕ 04-09-2025 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾನೂರು, ಬಾಳಲೆ, ಶ್ರೀಮಂಗಲ ಠಾಣಾ ವ್ಯಾಪ್ತಿಯ ಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.