ಕೊಡಗಿನಲ್ಲಿ ಆಗಸ್ಟ್ 7 ರಿಂದ 14ರವರೆಗೆ ವಿವಿಧೆಡೆ ಮದ್ಯ ಮಾರಾಟ ನಿಷೇಧ
admincoorgdaily

ಮಡಿಕೇರಿ;ಹಿಂದೂ ಜಾಗರಣಾ ವೇದಿಕೆ ವತಿಯಿಂದ ಆಗಸ್ಟ್ 7 ರಿಂದ 14 ರವರೆಗೆ ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ "ಅಖಂಡ ಭಾರತ ಸಂಕಲ್ಪ ದಿನ" ಅಂಗವಾಗಿ ಬೃಹತ್ ಪಂಚನ ಮೆರವಣಿಗೆ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಮಹತ್ವದ ಆದೇಶ ಹೊರಡಿಸಿದೆ. ಮೆರವಣಿಗೆ ಸಂದರ್ಭದಲ್ಲಿ ಕಾನೂನು ಮತ್ತು ಶಾಂತಿ ಕಾಪಾಡುವ ದೃಷ್ಟಿಯಿಂದ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಸಂಬಂಧಪಟ್ಟ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಪ್ರತಿ ದಿನ 1000 ರಿಂದ 2000 ಜನರು ಹಾಗೂ 400 ರಿಂದ 600 ಉರಿಯುವ ಪಂಜಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆಗಸ್ಟ್ 7: ಮಡಿಕೇರಿ ನಗರದ 10 ಕಿ.ಮೀ ವ್ಯಾಪ್ತಿಯಲ್ಲಿ, ಆಗಸ್ಟ್8, ಮಾದಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿ ಹಾಗೂ ಐಗೂರು ಗ್ರಾಮ ಪಂಚಾಯ್ತಿ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ, ಆಗಸ್ಟ್ 9, ಶನಿವಾರಸಂತೆ ರಾಣಾ ವ್ಯಾಪ್ತಿ, ಕೊಡ್ಲಿಪೇಟೆ ಪಟ್ಟಣ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ,ಆಗಸ್ಟ್ 12 ವಿರಾಜಪೇಟೆ ನಗರ ರಾಣಾ ವ್ಯಾಪ್ತಿ ಸುತ್ತಮುತ್ತ 15 ಕಿ.ಮೀ ವ್ಯಾಪ್ತಿಯಲ್ಲಿ,ಆಗಸ್ಟ್ 14 ಕುಶಾಲನಗರ ಪಟ್ಟಣ ಮತ್ತು ಅದರ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ, ಮೇಲ್ಕಂಡ ದಿನಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿರುವುದಿಲ್ಲ.